• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ನಾವು ಮೂರ್ಖ ಮಾನವರಲ್ಲವೇ? | NAAVU MOORKHA MAANAVARALLAVE?

ಆ ಕ್ಷಣದ ಸತ್ಯಗಳಿವು. ಥಟ್ಟನೆ ಹೊಳೆದದ್ದನ್ನು ಹೊಳಪಾಗಿಸಲು ಹೋಗದೇ ಹೊಳೆದಂತೆ ಬರೆದಂಥ ಟಿಪ್ಪಣಿಗಳು. ಇಲ್ಲಿ ದಿನನಿತ್ಯದ ಸಂಭ್ರಮ, ಉಲ್ಲಾಸ, ದುಗುಡ, ಆತಂಕ, ಉಪದೇಶ, ಪ್ರಶ್ನೆ, ಬೆರಗು ಎಲ್ಲವೂ ಇದೆ. ಪಳಗಿದ ಲೇಖಕನ ಕೈಗೆ ಸಿಕ್ಕರೆ ಈ ಟಿಪ್ಪಣಿಗಳು ಕತೆಯೋ ಕವಿತೆಯೋ ಆಗುತ್ತದ್ದಿವು. ಸಾವು, ಬದುಕು, ವೇದಾಂತ, ತಮಾಷೆ, ಏಕಾಂತ, ವಿಷಾದ-ಎಲ್ಲವನ್ನೂ ವಿನಯ್‌ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ದಾಖಲಿಸಿದ್ದಾರೆ. ಬದುಕಿಗೆ ಭಾಷ್ಯ ಬರೆಯುವ ಆಸೆ ನಮ್ಮೆಲ್ಲರಿಗೂ ಇರುತ್ತದೆ. ಬದುಕನ್ನು ಹಿಡಿಯುವುದಕ್ಕೆ ಸುದೀರ್ಘ ಬರಹ ಬೇಕೇ ಅಥವಾ ಪುಟ್ಟ ಪುಟ್ಟ ಪ್ರಸಂಗಗಳಲ್ಲಿ ದಿನನಿತ್ಯದ ತವಕ ತಲ್ಲಣಗಳನ್ನು ಹಿಡಿದಿಡಬಹುದೇ ಎಂಬ ಉತ್ತರವಿಲ್ಲದ ಪ್ರಶ್ನೆಯನ್ನು ಮುಂದಿಟ್ಟುಕೊಂಡೇ ಈ ಬರಹಗಳನ್ನು ಓದಬೇಕು. ನನಗೆ ಇಷ್ಟವಾದದ್ದು ವಿನಯ್‌ ಅವರ ಬರಹದ ವಿಸ್ತಾರ ಮತ್ತು ವಿನಯ. ಅವರದು ಉಪದೇಶದ ಧಾಟಿ ಅಲ್ಲ, ಅರಿತುಕೊಳ್ಳುವ ಹಾದಿ. ತನಗೆ ಅನ್ನಿಸದ್ದಿನ್ನು ಓದುಗರ ಮುಂದಿಟ್ಟು ವಿಧೇಯ ವಿದ್ಯಾರ್ಥಿಯಂತೆ ಕೈ ಕಟ್ಟಿ ನಿಲ್ಲುವ ಅವರ ಸಜ್ಜನಿಕೆ ಮತ್ತು ಸರಳತೆ ಈ ಬರಹಗಳಲ್ಲೂ ಕಾಣಿಸುತ್ತದೆ. ಇವು ನಿಮ್ಮಲ್ಲೂ ಅನೇಕ ನೆನಪುಗಳನ್ನು ಉಕ್ಕಿಸಬಹುದು. ನಿಮ್ಮನ್ನೂ ಆಲೋಚನೆಗೆ ಹಚ್ಚಬಹುದು. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ವಿಚಿತ್ರವಾದ ನಡವಳಿಕೆಗಳನ್ನು ಮತ್ತೊಮ್ಮೆ ನೋಡಿಕೊಂಡು ತಮಾಷೆ ಮಾಡಿಕೊಳ್ಳುವ ಸದ್ಗುಣವನ್ನು ಕರುಣಿಸಬಹುದು. ಅಷ್ಟರ ಮಟ್ಟಿಗೆ ಇವು ಸಾರ್ಥಕ. -ಜೋಗಿ

₹180   ₹160

Buy Now
ನಾವು ಶಿಕ್ಷಕರು ಬದಲಾಗೋಣ | Naavu Shikshakaru Badalaagona

ಕಳೆದ ನಾಲ್ಕು ದಶಕಗಳಿಂದ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳು ಹಾಗೂ ಒಲವುನಿಲುವುಗಳ ಬಗ್ಗೆ ಅನನ್ಯವಾದ ರೀತಿಯಲ್ಲಿ ಬರವಣಿಗೆ ಮತ್ತು ಸಾರ್ವಜನಿಕ ಸಂಕಥನಗಳಲ್ಲಿ ನಾಡಿನ ಹೆಸರಾಂತ ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ, ಪಠ್ಯಪುಸ್ತಕಗಳ ರಚನೆ, ಶಿಕ್ಷಕರ ಶಿಕ್ಷಣ, ಮೌಲ್ಯ ಶಿಕ್ಷಣ, ಡಿಜಿಟಲ್ ಮಾಧ್ಯಮ ಇವೇ ಮೊದಲಾದ ಚರ್ಚಾರ್ಹ ವಿಚಾರಗಳಿಗೆ ಅಭಿಮುಖವಾಗಿ ಏನಾಗಿದೆ? ಏನಾಗಬೇಕಾಗಿದೆ ಎಂಬುದನ್ನು ತಲಸ್ಪರ್ಶಿಯಾಗಿ ವಿಶ್ಲೇಷಿಸಿ ಅತ್ಯಂತ ಖಚಿತವಾಗಿ ತಮ್ಮ ನಿಲುವುಗಳನ್ನು ಡಾ.ರಾವ್ ಇಲ್ಲಿ ಮಂಡಿಸಿದ್ದಾರೆ. ನಾವು ಅಷ್ಟಾಗಿ ಗಮನ ಕೊಡದ ಜಿಡ್ಡು ಕೃಷ್ಣಮೂರ್ತಿ, ಡಾ. ಅಂಬೇಡ್ಕರ್, ಡಾ. ಜೆಪಿ ನಾಯ್ಕ ಮುಂತಾದ ಚಿಂತಕರ ಶಿಕ್ಷಣ ದರ್ಶನಗಳ ಮೇಲೆ ವಿಶ್ಲೇಷವಾದ ಬೆಳಕು ಚೆಲ್ಲಿ ಸದ್ಯದ ಸಂದರ್ಭದಲ್ಲಿ ಅವರ ಮಹತ್ತ್ವವನ್ನು ಮನಗಾಣಿಸಿದ್ದಾರೆ. ಆಧುನಿಕೋತ್ತರ ಸಂದರ್ಭದಲ್ಲಿ ನಾಡಿನ ಶೈಕ್ಷಣಿಕಪ್ರಗತಿ ಹೇಗಾಗಬೇಕು, ಬೋಧನೆ ಕಲಿಕೆ ಹೇಗೆ ಉತ್ಕೃಷ್ಟಗೊಳ್ಳಬೇಕು ಮತ್ತು ಬಹಳ ಮುಖ್ಯವಾಗಿ ಶೈಕ್ಷಣಿಕ ಪ್ರಕ್ರಿಯೆಯ ಹೃದಯವೇ ಆಗಿರುವ ಶಿಕ್ಷಕರು ಹೇಗೆ ಬದಲಾಗಬೇಕು ಎಂಬುದನ್ನು ಡಾ. ರಾವ್ ಈ ಸಂಕಲನದ ಲೇಖನಗಳಲ್ಲಿ ಮಾರ್ಮಿಕವಾಗಿ ಪ್ರತಿಪಾದಿಸಿದ್ದಾರೆ. ಅಪಾರ ಅನುಭವ ಮತ್ತು ಅಧ್ಯಯನದ ಸಂಗಮವಾದ ಈ ಕೃತಿ ಶಿಕ್ಷಣ ಕ್ಷೇತ್ರದಲ್ಲಿ ದುಡಿಯುತ್ತಿರುವವರ ಅದರಲ್ಲೂ ಪ್ರಮುಖವಾಗಿ ಶಿಕ್ಷಕರ ಮತ್ತು ಶಿಕ್ಷಣದ ವಿದ್ಯಾರ್ಥಿಗಳ ಕಣ್ಣು ತೆರೆಸುವ ಬೆಳಕಿನ ಹಾದಿ.

₹220   ₹196

Buy Now
ನಾಸು | Naasu

nil

₹250   ₹223

Buy Now
ನಿನಗೆ ನೀನೇ ಗುರು | Ninage Nine Guru

ಸಾಧಕರ ಬದುಕುಗಳು ನಮ್ಮ ಬದುಕನ್ನು ಎತ್ತರಿಸಿಕೊಳ್ಳುವುದಕ್ಕೆ, ಉದಾತ್ತೀಕರಿಸಿಕೊಳ್ಳುವುದಕ್ಕೆ ನಿದರ್ಶನ, ಪ್ರೇರಣೆ ಮತ್ತು ಮಾರ್ಗದರ್ಶನಗಳನ್ನು ನೀಡುತ್ತವೆ. ನಮ್ಮ ನಾಡಿನಲ್ಲಿ ಅನೇಕ ಮಂದಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರಿಗೆ ಅವರೇ ಗುರುವಾಗಿದ್ದಾರೆ. ಈ ನಿಟ್ಟಿನಲ್ಲಿ ಡಿ.ವಿ.ಜಿ.ಯವರ ಮಂಕುತಿಮ್ಮನ ಕಗ್ಗದ ಸಾಲುಗಳು ನೆನಪಾಗುತ್ತವೆ. 'ನಿನಗಾರು ಗುರುವಹರು? ನೀನೊಬ್ಬ ತಬ್ಬಲಿಗ ಉಣುತ ದಾರಿಯ ಕೆಲದಿ ಸಿಕ್ಕಿದೆಂಜಲನು ದಿನವ ಕಳೆ, ಗುರು ಶಿಷ್ಯಪಟ್ಟಗಳು ನಿನಗೇಕೆ? ನಿನಗೆ ನೀನೇ ಗುರುವೊ ಮಂಕುತಿಮ್ಮ'. ಡಿ.ವಿ.ಜಿ.ಯವರು ಹೇಳುವಂತೆ ನಾವು ಪಡೆದ ಎಂಜಲು ಅಂದರೆ ಅನ್ಯರಿಂದ ದೊರೆತ ತಿಳಿವಳಿಕೆ. ಇದು ಸಾರ್ಥಕವಾಗಬೇಕಾದರೆ ನಮ್ಮ ಪ್ರಜ್ಞೆ ಜಾಗೃತವಾಗಿರಬೇಕು. ಅದಕ್ಕೆ “ನಿನಗೆ ನೀನೇ ಗುರು" ಎಂದಿದ್ದಾರೆ. ಅರಿವಿನ ಬೆಳಕಾಗಿ ದಾರಿ ತೋರುವ ಗುರು ನಮ್ಮೊಳಗೆ ಇದ್ದಾನೆ. ಅಂತರಂಗದ ಆತ್ಮಸಾಕ್ಷಿಗಿಂತ ಮಿಗಿಲಾದ ಜ್ಞಾನ ಬೇರೊಂದಿಲ್ಲ. ನಮ್ಮೊಳಗಿನ ಪ್ರಜ್ಞೆ ಜಾಗೃತವಾಗದಿದ್ದರೆ ನಾವು ಪಡೆದ ಜ್ಞಾನವೆಲ್ಲವೂ ವ್ಯರ್ಥವಾಗುತ್ತದೆ. ಗುರುಶಿಷ್ಯ ಪಟ್ಟಗಳನ್ನು ಬಿಟ್ಟು ನಮಗೆ ನಾವೇ ಬೆಳಕಾಗಬೇಕು, ಸ್ಫೂರ್ತಿಯ ಸೆಲೆಯಾಗಬೇಕು, ಪ್ರೇರಣೆಯ ಅಲೆಯಾಗಬೇಕು. ಈ ಶಕ್ತಿಯು ಇಂತಹ ಸಕಾರಾತ್ಮಕ ದೃಷ್ಟಿಯಿಂದಲೇ ಜೀವನ ಸಾರ್ಥಕವಾಗುವುದಲ್ಲವೇ? ಕನ್ನಡ ನಾಡಿನ ವಿವಿಧ ಕ್ಷೇತ್ರಗಳ ಸಾಧಕರ ಕುತೂಹಲಕಾರಿ ವಿವರಗಳ ಹಿನ್ನೆಲೆಯೊಂದಿಗೆ ಅವರ ವೈಶಿಷ್ಟ್ಯಗಳನ್ನು ಈ ಪುಸ್ತಕದಲ್ಲಿ ಪರಿಚಯಿಸಲಾಗಿದೆ. ಇಂದು ನಮ್ಮೆದುರು ಸಾಧನೆಗೆ ಅನೇಕ ಬಾಗಿಲುಗಳು ತೆರೆದಿವೆ. ಸಾಧನೆಯ ರಂಗ ಕೈಬೀಸಿ ಕರೆದಿದೆ. ಈ ಎಲ್ಲ ಅವಕಾಶಗಳನ್ನು ನಮ್ಮ ತಾರುಣ್ಯದ ಬಿಸುಪಿನಲ್ಲಿ ಇರುವವರು ಬಳಸಿಕೊಳ್ಳಲಿ ಎಂಬುದು ನನ್ನ ಪುಟ್ಟ ಆಸೆ. ಸಾಧನೆಯ ರಂಗಕ್ಕೆ ಅವರನ್ನು ಆಹ್ವಾನಿಸುವ ಸಣ್ಣ ಪ್ರಯತ್ನ ಈ ಪುಸ್ತಕ. ಇಲ್ಲಿನ ಸಾಧಕರ ಬದುಕು ಇಂದಿನ ತಲೆಮಾರಿಗೆ ಮಾದರಿಯಾಗಲಿ ಎಂದು ಆಶಿಸುತ್ತೇನೆ.

₹360   ₹288

Buy Now
ನಿನಾದ/Ninaada

nil

₹135   ₹120

Buy Now