ವೀರಲೋಕ ಪುಸ್ತಕ ಸಂತೆ ಕಳೆದ ಎರಡು ಆವೃತ್ತಿಗಳನ್ನು ಯಶಸ್ವಿಯಾಗಿ ಮುಗಿಸಿ, ಇದೀಗ 2025ರ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಮೂರನೇ ಆವೃತ್ತಿಯ ತಯಾರಿಯಲ್ಲಿದೆ. ಮೂರು ದಿನ ನಡೆಯುವ ಈ ಸಂತೆಯ "ಓಲೇ ವಿಭಾಗ"ಕ್ಕೆ ಲೇಖಕರನ್ನು ಆಹ್ವಾನಿಸಲಾಗಿದೆ.
ಕನ್ನಡ ಸಾಹಿತ್ಯದಲ್ಲಿ ಕೃಷಿ ಮಾಡಿರುವ ಯಾವುದೇ ಲೇಖಕರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿ ಆಯ್ಕೆಯಾದ ಲೇಖಕರಿಗೆ ಒಂದು ದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಪುಸ್ತಕ ಮಳಿಗೆಯಲ್ಲಿ ತಮ್ಮದೇ ಪುಸ್ತಕಗಳನ್ನು ಮಾರಾಟ ಮಾಡಲು ಉಚಿತವಾಗಿ ಅನುವುಮಾಡಿಕೊಡಲಾಗುತ್ತದೆ.